ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ BDA ಟೋಲ್ ಬಳಿ ನಡೆದಿದೆ. ಈ ಘಟನೆಯಲ್ಲಿ ಸುಮುಖ್ (22) ಹಾಗೂ ಲೀನಾ ನಾಯ್ಡು (19) ಮೃತ ದುರ್ದೈವಿಗಳು.
ಪಿಇಎಸ್ ಕಾಲೇಜು ಕಡೆಯಿಂದ ಸೋಂಪುರ ಮಾರ್ಗವಾಗಿ ಸಾಗುತ್ತಿದ್ದಾಗ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಎದುರು ಮಾರ್ಗದಿಂದ ಬರುತ್ತಿದ್ದ ಬಸ್ಗೆ ಹೋಂಡಾ ಸಿಟಿ ಕಾರು ಡಿಕ್ಕಿ ಹೊಡೆದಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಎದುರುಗಡೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ.
ಬಸ್ ಚಾಲಕನ ಕಾಲಿಗೆ ಗಾಯವಾಗಿದ್ದು. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜು-ಗುಜ್ಜು ಆಗಿ ಹೋಗಿದೆ. ಕೆಂಗೇರಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ