ರಾಜ್ಯ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಸೇರಿ ಇತರೆ ವಿವಿಐಪಿಗಳಿಗೆ ನಿವೇಶನ ಹಂಚಿಕೆ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತ ಎಂ.ಬಿ ರಾಜೇಶ್ ಗೌಡ ಅವರನ್ನು ಎತ್ತಂಗಡಿ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಬಹು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದಕ್ಕೆ ಕೋರ್ಟ್ ರಾಜೇಶ ಗೌಡ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನು ಓದಿ – ಕುಮಾರಣ್ಣನ ಜೊತೆ ನನ್ನನ್ನು ಜನ ಒಂದುಗೂಡಿಸಿದ್ದಾರೆ: ಜಿಟಿಡಿ ಜೆಡಿಎಸ್‌ನಲ್ಲೇ ಉಳಿಯುತ್ತಾರಾ ?
ಡಾ.ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಎಸ್.ಅಬ್ದುಲ್ ನಜೀರ್ ಹಾಗೂ ಸಂಜೀವ್ ಖನ್ನಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಅಧಿಕಾರಿಗಳಿಗೆ ಚಾಟಿ ಬೀಸಿತು.
2021ರ ಅ . 29ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ತೀರ್ಮಾನ ತೆಗೆದುಕೊಂಡಿದ್ದಕ್ಕೆ ಬಿಡಿಎ ವಿರುದ್ಧ ಕೆಂಡಾಮಂಡಲವಾಗಿದೆ.
ಕೋರ್ಟ್ ಆದೇಶ ಉಲ್ಲಂಘಿಸಿದ ಬಳಿಕ ಆಯುಕ್ತರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ ಎಂದರೆ ಅರ್ಥವೇನು? ಜಿ ಕೆಟಗರಿ ನಿವೇಶನವನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಆಯುಕ್ತರಿಗೆ ಕೋರ್ಟ್ ಆದೇಶಗಳ ಬಗ್ಗೆ ಗೌರವವೇ ಇಲ್ಲ. ಆದೇಶಕ್ಕೆ ಅವಿಧೇಯತೆ ತೋರಿದ ರಾಜೇಶ ಗೌಡ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು.
ಇಂದಿನಿಂದ ಅವರು ಯಾವುದೇ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ. ಇದು ಕೋರ್ಟ್ ಆದೇಶ. ಬಿಡಿಎ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿಯವರು ಅಕ್ರಮ ಹಂಚಿಕೆಯಲ್ಲಿ ಭಾಗಿಯಾಗಿದ್ದು ಅವರನ್ನು ವರ್ಗಾವಣೆ ಮಾಡುವ ಬಗ್ಗೆ ಪರಿಶೀಲನೆ ನಡೆಸುತ್ತೇವೆ.
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ಬೆಂಗಳೂರು-ಮೈಸೂರು ರೈಲು ಸಂಚಾರ ವಿಳಂಬ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ