ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ನೂತನ ಸಚಿವ ಸಂಪುಟದ ಇಬ್ಬರು ಸಚಿವರು ತಮಗೆ ದೊರೆತ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರಾದ ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಅವರೇ ಈ ಅತೃಪ್ತಿ ಹೊರಹಾಕಿದವರು.
ತಮಗೆ ದೊರೆತಿರುವ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ಬಗ್ಗೆ ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಹಠವಾದಿ, ನನ್ನ ಹಟ ಬಿಡುವುದಿಲ್ಲ. ನಾನು ಯಾವ ದಾರಿ ತುಳಿಯುತ್ತೇನೆ ಎಂಬುದನ್ನು ಈಗಲೇ ಹೇಳಲಾಗದು. ಮುಖ್ಯಮಂತ್ರಿಗಳಿಂದ ಬರುವ ಉತ್ತರ ಆಧರಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ ಸಚಿವರಾಗಿರುವ ಎಂಟಿಬಿ ನಾಗರಾಜ್ ಅವರು ತಮಗೆ ಲಭಿಸಿದ ಖಾತೆ ಬಗ್ಗೆ ಅಕ್ರೋಶಗೊಂಡಿದ್ದಾರೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಖಾತೆ ಹಂಚಿಕೆಯಲ್ಲಿ ತಮಗೆ ಅಸಮಾಧಾನ ಇದೆ ಎಂದು ಎಂಟಿಬಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ. ಮುಂದಿನ ಎರಡು- ಮೂರು ದಿನಗಳಲ್ಲಿ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ