ಬಾಲಕಿಯೊಬ್ಬಳಿಗೆ ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಪ್ರಕರಣದಲ್ಲಿ ಕಾಂತರಾಜು(52) ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.
ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು,ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ.ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್ ನಲ್ಲಿ ಕೆಲಸಕ್ಕಿದ್ದ ಕಾಂತರಾಜು.ಇದನ್ನು ಓದಿ –ನಾಳೆಯಿಂದ ಅ. 27ರವರೆಗೆ ಹಾಸನಾಂಬ ದೇವಾಲಯ ಓಪನ್ : ಭಕ್ತರ ದರ್ಶನಕ್ಕೆ ಅವಕಾಶ
ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯ ನಿವಾಸಿ ದಿವ್ಯ(10)ಳಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ಕಾಂತರಾಜು ತಿಳಿಸಿದ್ದ.
ಬಾಲಕಿ ದಿವ್ಯ ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲೇ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ.
ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬ ದಂಪತಿಯ ಪುತ್ರಿ ದಿವ್ಯಾ ಬೆಳಿಗ್ಗೆ 11 ಗಂಟೆಗೆ ಟ್ಯೂಶನ್ ಗೆ ಎಂದು ಮನೆಯಿಂದ ಹೋದವಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.
ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ದಿವ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿ ಆತನೂ ದಿವ್ಯಳ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ.
ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ಯಾರೋ ಒಬ್ಬರು ಬಾಲಕಿ ನೀರಿನ ಸಂಪ್ ನಲ್ಲಿ ಬಿದ್ದಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ದಿವ್ಯಳ ಶವ ಪತ್ತೆಯಾಗಿತ್ತು.
ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಸ್ಥಳಕ್ಕೆ ಡಿವೈಎಸ್ ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಿ ಆರೋಪಿಯ ಪತ್ತೆಗೆ ಪೋಲಿಸರು ತನಿಖೆಗೆ ಮುಂದಾದರು.
ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್,ಅಶೋಕ್ ಅವರು ಟ್ಯೂಷನ್ ಸೆಂಟರ್ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ಗೊಂಡಿದ್ದರು.ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿ ದಿವ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾನೆ.
ಮಳವಳ್ಳಿ ಪಟ್ಟಣ ಠಾಣೆಯ ಪೋಲಿಸರು ಕಾಂತರಾಜು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
- ಮಕರ ಸಂಕ್ರಾಂತಿ
- ತಿರುಪತಿ ದೇವಾಲಯದಲ್ಲಿ ಬೆಂಕಿ ಅವಘಡ: ಲಡ್ಡು ವಿತರಣಾ ಕೌಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ