crime

ಮಳವಳ್ಳಿ ಬಾಲಕಿ ದಿವ್ಯ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಬಂಧನ

ಬಾಲಕಿಯೊಬ್ಬಳಿಗೆ ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಪ್ರಕರಣದಲ್ಲಿ ಕಾಂತರಾಜು(52) ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು,ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ.ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ ಕೆಲಸಕ್ಕಿದ್ದ ಕಾಂತರಾಜು.ಇದನ್ನು ಓದಿ –ನಾಳೆಯಿಂದ ಅ. 27ರವರೆಗೆ ಹಾಸನಾಂಬ ದೇವಾಲಯ ಓಪನ್ : ಭಕ್ತರ ದರ್ಶನಕ್ಕೆ ಅವಕಾಶ

ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯ ನಿವಾಸಿ ದಿವ್ಯ(10)ಳಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ಕಾಂತರಾಜು ತಿಳಿಸಿದ್ದ.

ಬಾಲಕಿ ದಿವ್ಯ ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲೇ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ.

ಪಟ್ಟಣದ ಎನ್ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬ ದಂಪತಿಯ ಪುತ್ರಿ ದಿವ್ಯಾ ಬೆಳಿಗ್ಗೆ 11 ಗಂಟೆಗೆ ಟ್ಯೂಶನ್ ಗೆ ಎಂದು ಮನೆಯಿಂದ ಹೋದವಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.

ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ದಿವ್ಯ ಬಗ್ಗೆ ಏನೂ ಗೊತ್ತಿಲ್ಲ ಎಂದು ಹೇಳಿ ಆತನೂ ದಿವ್ಯಳ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ.

ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ಯಾರೋ ಒಬ್ಬರು ಬಾಲಕಿ ನೀರಿನ ಸಂಪ್ ನಲ್ಲಿ ಬಿದ್ದಿರುವ ಬಗ್ಗೆ ನೀಡಿದ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್ ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ದಿವ್ಯಳ ಶವ ಪತ್ತೆಯಾಗಿತ್ತು.

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಸ್ಥಳಕ್ಕೆ ಡಿವೈಎಸ್ ಪಿ‌ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.ಬಾಲಕಿಯ ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸಾಗಿಸಿ ಆರೋಪಿಯ ಪತ್ತೆಗೆ ಪೋಲಿಸರು ತನಿಖೆಗೆ ಮುಂದಾದರು.


ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್,ಅಶೋಕ್ ಅವರು ಟ್ಯೂಷನ್ ಸೆಂಟರ್‌ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ಗೊಂಡಿದ್ದರು.ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿ ದಿವ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ‌ ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾನೆ.

ಮಳವಳ್ಳಿ ಪಟ್ಟಣ ಠಾಣೆಯ ಪೋಲಿಸರು ಕಾಂತರಾಜು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

Team Newsnap
Leave a Comment

Recent Posts

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024