ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯ ಆರೋಗ್ಯದಲ್ಲಿ ಮಂಗಳವಾರ ಚೇತರಿಕೆ ಕಂಡಿದೆ.
ಸಂತ್ರಸ್ತೆಯ ತೊಡೆಯ ಭಾಗಕ್ಕೆ ಸರ್ಜರಿ ಮಾಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆ್ಯಸಿಡ್ ದಾಳಿಯಿಂದ ಶೇ.40 ರಿಂದ ಶೇ.50 ರಷ್ಟು ಸುಟ್ಟುಹೋಗಿದ್ದ ಯುವತಿ ಸ್ಥಿತಿ ಗಂಭೀರವಾಗಿತ್ತು.
ಸೆಂಟ್ ಜಾನ್ ಆಸ್ಪತ್ರೆಯ ವೈದ್ಯರು ಯುವತಿಯ ಎರಡು ತೊಡೆ ಭಾಗದಲ್ಲಿ ಇನ್ಫೆಕ್ಷನ್ ಆಗದ ರೀತಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ, ಆ್ಯಸಿಡ್‍ನಿಂದ ಸುಟ್ಟಿದ ಡೆಡ್ ಸ್ಕಿನ್‍ನನ್ನು ತೆಗೆದಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ಪ್ರಜ್ಞಾಹೀನಳಾಗಿದ್ದ ಯುವತಿಗೆ ಮಧ್ಯರಾತ್ರಿ ವೇಳೆಗೆ ಪ್ರಜ್ಞೆ ಬಂದಿದ್ದು, ಯುವತಿ ಪೋಷಕರ ಜೊತೆ ಮಾತನಾಡುತ್ತಿದ್ದಾಳೆ.
ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆ ಐಸಿಯುನಲ್ಲಿ ಯುವತಿಗೆ ಚಿಕಿತ್ಸೆ ಮುಂದುವರೆದಿದೆ. ಮತ್ತೊಂದೆಡೆ ಆ್ಯಸಿಡ್ ದಾಳಿಕೋರ ನಾಗೇಶ್‍ಗಾಗಿ ಕಾಮಾಕ್ಷಿಪಾಳ್ಯ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು