ಮಂಗಳೂರು : ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ನಡೆದಿದೆ.
ಅಬೀನ್ ಕೇರಳ ಮೂಲದ ವಿದ್ಯಾರ್ಥಿನಿಯರಾದ ಅಲೀನಾ ಸಿ.ಬಿ, ಅರ್ಚನಾ ಹಾಗೂ ಅಮೃತ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.
ಕಡಬ ಸರ್ಕಾರಿ ಶಾಲೆಯಲ್ಲಿ ಘಟನೆ ನಡದಿದ್ದು, ಆರೋಪಿ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ .
ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಆ್ಯಸಿಡ್ ದಾಳಿಗೊಳಗಾದ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲು ಸಿದ್ಧತೆ ನಡೆಸಲಾಗಿದೆ.
ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳುಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಆ್ಯಸಿಡ್ ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದೆ.
ಅಬೀನ್ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದು ,ಅಲ್ಲಿದ್ದ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದಾರೆ.ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ನಿಧನ
ಪೊಲೀಸರು ಆರೋಪಿ ಎಬಿನ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು