ಪತ್ರಕರ್ತರ ಉಚಿತ ಬಸ್ ಪಾಸ್ ಗೆ ಕ್ರಮ :ಸಾರಿಗೆ ಸಚಿವರ ಭರವಸೆ

Team Newsnap
1 Min Read

ಬೆಂಗಳೂರು: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಆಗುತ್ತಿರುವ ಲೋಪದೋಷಗಳನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬಸ್ ಪಾಸ್ ಸಮಸ್ಯೆಗಳ ಬಗ್ಗೆ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ನೀಡುವುದಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಅದನ್ನು ಶೀಘ್ರವಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ವಾರ್ತಾ ಇಲಾಖೆಯ ಮೂಲಕ ಮಾನ್ಯತೆ ಪಡೆದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಿದ್ದು, ಅದನ್ನು ಪ್ರತಿ ಎರಡು ವರ್ಷಕ್ಕೊಮ್ಮೆ ನವೀಕರಣ ಮಾಡಲಾಗುತ್ತಿದೆ. ಆದರೆ, ಈ ಬಾರಿ ಅವಧಿ ಮುಗಿದಿದ್ದರೂ, ಈ ತನಕ ನವೀಕರಣವಾದ ಪಾಸ್‌ಗಳನ್ನು ನೀಡಿಲ್ಲ. ಇದರಿಂದಾಗಿ ಪತ್ರಕರ್ತರು ಬಸ್ ಪ್ರಯಾಣ ಸಂದರ್ಭದಲ್ಲಿ ಕಿರಿ ಕಿರಿ ಅನುಭವಿಸುವಂತಾಗಿದೆ. ಆದ್ದರಿಂದ ನವೀಕರಣ ಮಾಡಿದ ಬಸ್ ಪಾಸ್ ಕಾರ್ಡ್‌ಗಳನ್ನು ಕೂಡಲೇ ಕೊಡುವ ವ್ಯವಸ್ಥೆ ಮಾಡಬೇಕು ಎನ್ನುವುದನ್ನು ಸಚಿವರ ಗಮನಕ್ಕೆ ತರಲಾಯಿತು.ಹಾಸನದ ಹಿರಿಯ ಪತ್ರಕರ್ತ ಮುರುಳಿ ನಿಧನ

ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವರು, ಈ ಬಗ್ಗೆ ಶೀಘ್ರದಲ್ಲಿಯೇ ಸಭೆಯನ್ನು ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಮತ್ತು ಪತ್ರಕರ್ತರ ಬಸ್ ಪಾಸ್‌ಗೆ ಇರುವ ಅಡೆ ತಡೆಗಳನ್ನು ನಿವಾರಣೆ ಮಾಡಲಾಗುವುದು ಎಂದರು.

Share This Article
Leave a comment