Karnataka

ಪತ್ರಕರ್ತರ ಉಚಿತ ಬಸ್ ಪಾಸ್ ಗೆ ಕ್ರಮ :ಸಾರಿಗೆ ಸಚಿವರ ಭರವಸೆ

ಬೆಂಗಳೂರು: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಆಗುತ್ತಿರುವ ಲೋಪದೋಷಗಳನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬಸ್ ಪಾಸ್ ಸಮಸ್ಯೆಗಳ ಬಗ್ಗೆ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ನೀಡುವುದಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಅದನ್ನು ಶೀಘ್ರವಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ವಾರ್ತಾ ಇಲಾಖೆಯ ಮೂಲಕ ಮಾನ್ಯತೆ ಪಡೆದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಿದ್ದು, ಅದನ್ನು ಪ್ರತಿ ಎರಡು ವರ್ಷಕ್ಕೊಮ್ಮೆ ನವೀಕರಣ ಮಾಡಲಾಗುತ್ತಿದೆ. ಆದರೆ, ಈ ಬಾರಿ ಅವಧಿ ಮುಗಿದಿದ್ದರೂ, ಈ ತನಕ ನವೀಕರಣವಾದ ಪಾಸ್‌ಗಳನ್ನು ನೀಡಿಲ್ಲ. ಇದರಿಂದಾಗಿ ಪತ್ರಕರ್ತರು ಬಸ್ ಪ್ರಯಾಣ ಸಂದರ್ಭದಲ್ಲಿ ಕಿರಿ ಕಿರಿ ಅನುಭವಿಸುವಂತಾಗಿದೆ. ಆದ್ದರಿಂದ ನವೀಕರಣ ಮಾಡಿದ ಬಸ್ ಪಾಸ್ ಕಾರ್ಡ್‌ಗಳನ್ನು ಕೂಡಲೇ ಕೊಡುವ ವ್ಯವಸ್ಥೆ ಮಾಡಬೇಕು ಎನ್ನುವುದನ್ನು ಸಚಿವರ ಗಮನಕ್ಕೆ ತರಲಾಯಿತು.ಹಾಸನದ ಹಿರಿಯ ಪತ್ರಕರ್ತ ಮುರುಳಿ ನಿಧನ

ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವರು, ಈ ಬಗ್ಗೆ ಶೀಘ್ರದಲ್ಲಿಯೇ ಸಭೆಯನ್ನು ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಮತ್ತು ಪತ್ರಕರ್ತರ ಬಸ್ ಪಾಸ್‌ಗೆ ಇರುವ ಅಡೆ ತಡೆಗಳನ್ನು ನಿವಾರಣೆ ಮಾಡಲಾಗುವುದು ಎಂದರು.

Team Newsnap
Leave a Comment

Recent Posts

KRS ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ

ಮಂಡ್ಯ :ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಾದಿತ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ… Read More

July 5, 2024

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಎರಡು ವರ್ಷಗಳ… Read More

July 5, 2024

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ… Read More

July 5, 2024

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024

ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ ಆರೋಗ್ಯಾಧಿಕಾರಿ ಬಲಿ

ಮೈಸೂರು : ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಗೆ ಮತ್ತೊಂದು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಆರೋಗ್ಯಾಧಿಕಾರಿ ನಾಗೇಂದ್ರ ಡೆಂಗ್ಯೂ ಜ್ವರದಿಂದ… Read More

July 4, 2024