ಕೊಡಗಿನ ಪ್ರವಾಸದಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಭಟನೆಯ ಬಿಸಿ ತಾಗಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲು ಮಡಿಕೇರಿಗೆ ಹೋಗಿದ್ದಾರೆ.ಇದನ್ನು ಓದಿ –ಮಹಾರಾಷ್ಟ್ರ ಸಮುದ್ರ ತಟದಲ್ಲಿ ಟೆರರ್ : ಬೋಟ್ಗಳಲ್ಲಿ ಭಾರೀ ಶಸ್ತ್ರಾಸ್ತ್ರ ಪತ್ತೆ
ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದ್ದರು. ಈಗ ಸಿದ್ದರಾಮಯ್ಯರ ಕಾರಿನತ್ತ ಮೊಟ್ಟೆ ಎಸೆಯಲಾಗಿತ್ತು. ಎಸೆದ ಮೊಟ್ಟೆ ಸಿದ್ದರಾಮಯ್ಯರಿದ್ದ ಕಾರಿಗೆ ಬೀಳಲಿಲ್ಲ.
ಇದೇ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು