January 29, 2026

Newsnap Kannada

The World at your finger tips!

BJP , Sandalwood , Politics

ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

Spread the love

ಕನ್ನಡದ ಹಿರಿಯ ನಟ ಅನಂತ್ ನಾಗ್ ಬುಧವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ನಿಜವಾಗಿದೆ.7 ನೇ ವೇತನ ಆಯೋಗದಲ್ಲಿ ‘OPS’ ಅನುಷ್ಟಾನಕ್ಕೆ ಒತ್ತಾಯ : ಸರ್ಕಾರಕ್ಕೆ 7 ದಿನದ ಗಡುವು

ಬುಧವಾರ ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ.

ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ.

ಅನಂತ್ ನಾಗ್ ರಾಜಕಾರಣಕ್ಕೆ ಬರುತ್ತಿರುವುದು ಹೊಸದೇನೂ ಅಲ್ಲ. ಈಗಾಗಲೇ ಅವರು ಜೆ.ಎಚ್. ಪಟೇಲ್ ನೇತೃತ್ವದ ಸರಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದವರು.

2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಅಲ್ಲದೇ, ಶಾಸಕರಾಗಿ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ.

error: Content is protected !!