ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ

Team Newsnap
1 Min Read

ಬೆಂಗಳೂರು : ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದೆ, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

ಗೌರಿ ಗಣೇಶ್, ಕೌರವ, ರಂಗ ಎಸ್.ಎಸ್.ಎಲ್.ಸಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಜೊತೆಗೆ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಕೂಡ ಇವರದ್ದು.

ಬ್ಯಾಂಕ್ ಜನಾರ್ಧನ್ ಬೆಂಗಳೂರಿನಲ್ಲಿ ಜನಿಸಿದರು. ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ಬೆಂಗಳೂರಿನಲ್ಲಿ.

ಕನ್ನಡ ಚಿತ್ರರಂಗದ ದೊಡ್ಡ ಹಾಸ್ಯ ನಟರ ಜೊತೆಯಲ್ಲಿ, ಸಾದು ಕೋಕಿಲ, ಬುಲೆಟ್ ಪ್ರಕಾಶ್, ದೊಡ್ಡಣ್ಣ, ಹೀಗೆ ಹಲವಾರು ನಟರ ಜೊತೆ ಅಭಿನಹಿಸಿ ತಮ್ಮನು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

1991ರಿಂದ ಕನ್ನಡ ಚಿತ್ರರಂಗದಲ್ಲಿ ಅಭಿನಹಿಸುವ ಅವಕಾಶ ಸಿಗುತ್ತದೆ. ಅನೇಕ ಚಿತ್ರಗಳು, ದಾರಾವಾಹಿಗಳಲ್ಲಿ ನಟಿಸಿ ಸೈ ಅನಿಸಿಕೊಂಡಿದ್ದಾರೆ ಬ್ಯಾಂಕ್ ಜನಾರ್ಧನ್.ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ

60 ಕ್ಕೂ ಹೆಚ್ಚು ಸಿನೆಮಾಗಳಲ್ಲಿ ಅಭಿನಹಿಸಿ ತಮ್ಮದೇ ಅದ ಒಂದು ನಿರಂತರ ಹಾದಿಯಲ್ಲಿ ಗುರುತಿಸಿಕೊಂಡಿದ್ದಾರೆ.

Share This Article
Leave a comment