May 29, 2022

Newsnap Kannada

The World at your finger tips!

chethen 1

ನಟ ಚೇತನ್ 14 ದಿನ ನ್ಯಾಯಾಂಗ ಬಂಧನಕ್ಕೆ

Spread the love

ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವುದು ಹಾಗೂ ನ್ಯಾಯಾಂಗ ನಿಂದನೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟ ಚೇತನ್‌ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಟ ಚೇತನ್‌ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ವಕೀಲ ಕೆ.ಬಾಲನ್ , ಚೇತನ್‌ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಚೇತನ್‌ಕುಮಾರ್‌ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಮುಸ್ಲಿಂ ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್‌ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ ಎಂಬ ಆರೋಪ ಮಾಡಿ ಶೇಷಾದ್ರಿಪುರಂ ಪೋಲಿಸರು ಸೋಮೋಟೊ ಕೇಸು ದಾಖಲಿಸಿದ್ದರು.

error: Content is protected !!