ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಿಸಿ ಮಹತ್ವದ ಆದೇಶ ನೀಡಿದೆ. ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದವನ್ನು ಹೈಕೋರ್ಟ್ ನ್ಯಾಯಪೀಠ ಆಲಿಸಿದೆ.
ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದಿಸಿದರೆ, ಸರ್ಕಾರದ ಪರವಾಗಿ ಎಸ್.ಪಿ.ಪಿ. ಪ್ರಸನ್ನ ಕುಮಾರ್ ಪ್ರಬಲ ವಾದ ಮಂಡಿಸಿದರು. ವಾದ, ಪ್ರತಿವಾದಗಳ ನಂತರ, ಹೈಕೋರ್ಟ್ ತಮ್ಮ ಅಂತಿಮ ತೀರ್ಪನ್ನು ಕಾಯ್ದಿರಿಸಿದ್ದು, ತೀರ್ಪು ನೀಡುವವರೆಗೆ ದರ್ಶನ್‌ಗೆ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಆದೇಶಿಸಿದೆ.
ಇದನ್ನು ಓದಿ –ಪ್ರೊ.ವಿ.ಕೆ.ನಟರಾಜ್ ನಿಧನ
ಹೈಕೋರ್ಟ್, ಡಿಸೆಂಬರ್ 11 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಸಂದರ್ಭದಲ್ಲಿ, ದರ್ಶನ್‌ಗೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಬಗ್ಗೆ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಇದೀಗ, ಜಾಮೀನು ಕುರಿತು ಅಂತಿಮ ತೀರ್ಪು ಪ್ರಕಟಿಸುವವರೆಗೂ ಮಧ್ಯಂತರ ಜಾಮೀನನ್ನು ವಿಸ್ತರಿಸುವ ಮೂಲಕ ನಟ ದರ್ಶನ್‌ಗೆ ತಾತ್ಕಾಲಿಕ ಶಾಂತಿ ಒದಗಿಸಲಾಗಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ