ಬೆಂಗಳೂರು : ನಟ ದರ್ಶನ್ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಮಾಹಿತಿಗಳನ್ನು ಮಾಧ್ಯಮಗಳು ಬಯಲು ಮಾಡುತ್ತಿರುವ ಹಿನ್ನೆಲೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.
ಎಸಿಪಿ ಚಂದನ್ ಕುಮಾರ್ (ತನಿಖಾಧಿಕಾರಿ) ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು , 3991 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ನಟ ದರ್ಶನ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಸಿ ಹಲ್ಲೆ ಮಾಡಿದ್ದು ಧೃಡವಾಗಿದೆ.
ಕೊಲೆ ಕೇಸ್ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದ್ದು ,ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ.ಸಿ ಪಿ ಯೋಗೇಶ್ವರ್ ಆಪ್ತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : FIR ದಾಖಲು
ಈ ಮೂಲಕ ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವುದು ಧೃಡವಾಗಿದೆ.
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ