ದಕ್ಷಿಣ ಭಾರತದ ನಟ ಕಮಲ್ ಹಾಸನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಸ್ವತಃ ನಟ ತಮ್ಮ ಟ್ಟಿಟ್ಟರ್ ಮೂಲಕ ತಿಳಿಸಿದ್ದಾರೆ. ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದಾಗಿ ಹೇಳಿರುವ ಅವರು ಜಾಗೃತರಾಗಿರುವಂತೆ ಕರೆ ನೀಡಿದ್ದಾರೆ.
ಅಮೆರಿಕ ಪ್ರವಾಸದಿಂದ ಹಿಂದಿರುಗಿದ ಬಳಿಕ ನನಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿತು.
ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ಕೊರೊನಾ ಸಾಂಕ್ರಾಮಿಕ ರೋಗ ಇನ್ನೂ ತೊಲಗಿಲ್ಲವೆಂದು ಎಲ್ಲರೂ ಅರ್ಥ ಮಾಡಿಕೊಳ್ಳೊಣ ಮತ್ತು ಜವಾಬ್ದಾರಿಯುತವಾಗಿ ವರ್ತಿಸೋಣ. ಎಲ್ಲರೂ ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ. ಕಮಲ್ ಅವರಿಗೆ ಇದೇ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ನಟ ಕಮಲ್ ತಮ್ಮ ಮುಂಬರುವ ವಿಕ್ರಮ್ ಚಿತ್ರದಲ್ಲಿ ನಿರತರಾಗಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಚಿತ್ರದಲ್ಲಿ ಕಮಲ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಹಾಗೂ ಫಹಾದ್ ಫಾಸಿಲ್ ಕೂಡಾ ನಟಿಸಲಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ