ಬೆಂಗಳೂರು :ಕನ್ನಡ ಧಾರಾವಾಹಿ ಮೂಲಕ ಮನೆ ಹಾಗೂ ಮನವನ್ನು ತಲುಪಿದ ಕಿರಣ್ ರಾಜ್ ಕಾರು ಭೀಕರ ಅಪಘಾತಕ್ಕೊಳಗಾಗಿದೆ. ಎದೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
‘ರಾನಿ’ ಚಿತ್ರದ ನಾಯಕ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ವೇಳೆ ಮುಂಗೂಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ.
ಅಪಘಾತದಲ್ಲಿ ಕಾರು ಫುಲ್ ಜಖಂ ಆಗಿದ್ದು, ಘಟನೆಯಲ್ಲಿ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ
ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಕಿರಣ್ ರಾಜ್ ಗೆಚಿಕಿತ್ಸೆ ಮುಂದುವರೆದಿದೆ ಕಿರಣ್ ಎದೆ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ ನಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದೆ, ನಟನ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ನಿಂದಾಗಿ ಸೇಫ್ ಆಗಿದ್ದಾರೆ.ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ಕಿರುತೆರೆಯಿಂದ ಸ್ಯಾಂಡಲ್ವುಡ್ಗೂ ಎಂಟ್ರಿ ಕೊಟ್ಟಿದ್ದ ನಟ ಕಿರಣ್ ರಾಜ್ ಅವರ ಸಿನಿಮಾ ರಾನಿ ಇದೇ ಶುಕ್ರವಾರ ರಿಲೀಸ್ ಆಗಲಿದೆ. ಸಿನಿಮಾದ ಬಗ್ಗೆ ಸಾಕಷ್ಟು ಆಸೆ ಕನಸ್ಸುಗಳನ್ನು ಇಟ್ಟುಕೊಂಡಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )