ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಹಾಸ್ಯ ನಟ ಮೋಹನ್ ಜುನೇಜಾ ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ಮೋಹನ್ ಜುನೇಜ ಅವರನ್ನು ಚಿಕ್ಕಬಾಣವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 150ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟನೆ ಮಾಡಿರುವ ಮೋಹನ್ ಅವರು ಇತ್ತೀಚೆಗೆ ‘ಧಮಾಕ’ ಹಾಗೂ ಕೆಜಿಎಫ್ ಸಿನಿಮಾದಲ್ಲೂ ನಟಿಸಿದ್ದರು.
ಮೃತರು ಪುತ್ರ ಹಾಗೂ ಪತ್ನಿಯನ್ನು ಅಗಲಿದ್ದಾರೆ.100 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು