ಚಿತ್ರನಟ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Team Newsnap
1 Min Read
Actor mukhya Mantri Chandru joins Aam Admi Party

ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್ ಆದ್ಮಿ ಪಕ್ಷ (ಎಎಪಿ) ಸೇರಿದ್ದಾರೆ. ಚಂದ್ರು ಅವರು ಮೇ 29ರಂದು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ.

ಬೆಂಗಳೂರಿನಲ್ಲಿ ಮಂಗಳವಾರ ಆಪ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ.ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ ಎಂದರು.

ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, “ಕನ್ನಡಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿರುವ ಮುಖ್ಯಮಂತ್ರಿ ಚಂದ್ರುರವರು ಎಎಪಿಯ ʻಪ್ರಚಾರ ರಾಯಭಾರಿʼ ಆಗಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮುಂತಾದ ಕ್ಷೇತ್ರಗಳಲ್ಲಿ ದೆಹಲಿಯ ಕೇಜ್ರಿವಾಲ್‌ ಸರ್ಕಾರ ಮಾಡಿರುವ ಸಾಧನೆಯನ್ನು ಜನರಿಗೆ ತಲುಪಿಸಲಿದ್ದಾರೆ. ಚಂದ್ರುರವರ ಅನುಭವಿ ವ್ಯಕ್ತಿತ್ವವು ಪಕ್ಷದ ಸ್ವಚ್ಛ, ಪಾರದರ್ಶಕ, ಪ್ರಾಮಾಣಿಕ ಸಿದ್ಧಾಂತಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನೆರವಾಗಲಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
Leave a comment