ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ .
ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಟ ನಾಗಭೂಷಣ ಕಾರು ಅಪಘಾತವಾಗಿದ್ದು, ಪಾದಚಾರಿ ಎಸ್.ಪ್ರೇಮಾ (48) ಅವರು ಮೃತಪಟ್ಟಿದ್ದಾರೆ.
ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆ ನಿವಾಸಿ ಪ್ರೇಮಾ, ಪತಿ ಬಿ. ಕೃಷ್ಣ (58) ಜೊತೆ ನಡೆದುಕೊಂಡು ಹೊರಟಿದ್ದರು.
ಇದೇ ವೇಳೆ ನಾಗಭೂಷಣ ಕಾರು ಅತೀ ವೇಗದಲ್ಲಿ ಬಂದು ದಂಪತಿಗೆ ಗುದ್ದಿದೆ. ನಂತರ, ಅದೇ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ತೀವ್ರ ಗಾಯಗೊಂಡು ಪ್ರೇಮಾ ಮೃತಪಟ್ಟಿದ್ದಾರೆ. ಕೃಷ್ಣ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
More Stories
ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ನ್ಯಾಕ್ ಗ್ರೇಡ್ ಲಂಚ ಪ್ರಕರಣ: ವಿವಿ ಪ್ರಾಧ್ಯಾಪಕಿ ಸೇರಿದಂತೆ 10 ಮಂದಿ CBI ವಶಕ್ಕೆ
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ