ರಕ್ತದೊತ್ತಡದಲ್ಲಿನ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಯಾಗಿದ್ದಾರೆ.
ಡಿ.25 ರಂದು ರಕ್ತದೊತ್ತಡದಲ್ಲಿ ಏರುಪೇರಾಗಿದ್ದರಿಂದ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಆರೋಗ್ಯದಲ್ಲಿ ಸ್ಥಿರತೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಒಂದು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ರಜನಿಕಾಂತ್ ಗೆ ಸೂಚಿಸಿದ್ದಾರೆ. ರಕ್ತದೊತ್ತಡದ ಬಗ್ಗೆ ನಿಗಾವಹಿಸುವಂತೆಯೂ ಸೂಚಿಸಲಾಗಿದೆ.
ಹೈದರಾಬಾದ್ ನಲ್ಲಿ ಅಣ್ಣಾತೆ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ವೇಳೆ ರಜನಿಕಾಂತ್ ರಕ್ತದೊತ್ತಡದಲ್ಲಿ ಏರು ಪೇರಾಗಿತ್ತು. ಚಿತ್ರೀಕರಣ ಮೊಟಕುಗೊಳಿಸಿ ಅಪೋಲೋ ಆಸ್ಪತ್ರೆಗೆ ರಜನಿ ದಾಖಲಾಗಿದ್ದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ