ಆನಾರೋಗ್ಯದಿಂದ ಬಳಲುತ್ತಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು (72) ಅವರು ಇಂದು ಚಿಕಿತ್ಸೆ ಫಲಕಾರಿಯಾಗಿದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ಚಿರಪರಿಚಿತರಾಗಿದ್ದರು. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.