ಕೋಟೆನಾಡು ಚಿತ್ರದುರ್ಗ ರಾಜಕೀಯಕ್ಕೆ ಚಿತ್ರನಟ ಹಾಗೂ ಮಾಜಿ ಸಂಸದ ಶಶಿಕುಮಾರ್ ರೀ-ಎಂಟ್ರಿಯಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ಬಳಿಕ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ರಾಜಕೀಯದಿಂದ ದೂರ ಉಳಿದಿದ್ದ ಶಶಿಕುಮಾರ್ ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‍ಟಿ ಮೀಸಲಾತಿ ಕ್ಷೇತ್ರಗಳಾಗಿರುವ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಕ್ಷೇತ್ರಗಳತ್ತ ಚಿತ್ತ ವಹಿಸಿದ್ದಾರೆ.
ಅಭಿಮಾನಿಗಳೊಂದಿಗೆ ಎರಡು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿರುವ ಶಶಿಕುಮಾರ್, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಳಿಕ ಮೊಳಕಾಲ್ಮೂರು ತಾಲೂಕಿನ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಶುಭವಾಗುವಂತೆ ಪ್ರಾರ್ಥಿಸಿದರು.
ನಂತರ ನೆರೆದಿದ್ದ ಅಭಿಮಾನಿಗಳು ಹಾಗೂ ಸಾರ್ವಜನಿಕರ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸದ್ಯದಲ್ಲೇ ಕ್ಷೇತ್ರ ಮತ್ತು ಪಕ್ಷದ ಬಗ್ಗೆ ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದರು.
ಕಳೆದ ಬಾರಿ ಕೊನೆ ಗಳಿಗೆಯಲ್ಲಿ ಎರಡು ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು