ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಕೋಮಾ ಸ್ಥಿತಿಗೆ ಹೋದ ಶಿವರಾಮ್ ಅವರಿಗೆ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಿದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯ ಅಗತ್ಯವಿತ್ತು. ಆದರೆ ವಯಸ್ಸಿನ ಹಿನ್ನೆಲೆಯಲ್ಲಿ ಅವರ ದೇಹ ಶಸ್ತ್ರ ಚಿಕಿತ್ಸೆ ಹೊಂದಿಕೊಳ್ಳುವ ಸಾಮರ್ಥ್ಯವಿಲ್ಲದ ಕಾರಣ ಮೆದುಳಿನ ಊತ ಕಡಿಮೆಯಾಗಲು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದರು.
ಮೊದಲು ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದ್ದ ಶಿವರಾಮ್ ಅವರು, ಸಹೋದರ ರಾಮನಾಥನ್ ಅವರೊಂದಿಗೆ ಕನ್ನಡ, ಹಿಂದಿ ಚಿತ್ರಗಳನ್ನೂ ಇವರು ನಿರ್ಮಿಸಿದ್ದರು. ನಾಗರಹಾವು, ಹಾಲುಜೇನು, ಶರಪಂಜರ, ಡ್ರೈವರ್ ಹನುಮಂತು, ಶುಭಮಂಗಳ, ಹೊಂಬಿಸಿಲು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು