ನಟಿ ಹರಿಪ್ರಿಯಾ ಮತ್ತು ಗಾಯಕ, ನಟ ವಸಿಷ್ಠ ಸಿಂಹ ಹಸೆಮಣೆ ಏರಲು ಸಜ್ಜಾಗಿದ್ದಾರೆ.
ನಟಿ ಅದಿತಿ ಪ್ರಭುದೇವ ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬೆನ್ನಲ್ಲೇ ನಟಿ ಹರಿಪ್ರಿಯಾ ಮದುವೆ ವಿಚಾರ ಕೂಡ ಭಾರೀ ಸದ್ದಾಗಿದೆ.ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ : ಬಿಎಸ್‍ವೈ
ಬಹುಭಾಷಾ ನಟಿ ಹರಿಪ್ರಿಯಾ ಸ್ಯಾಂಡಲ್ ವುಡ್‌ನ ಖ್ಯಾತ ನಟ ವಸಿಷ್ಠ ಸಿಂಹ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ವಸಿಷ್ಠ ಮತ್ತು ಹರಿಪ್ರಿಯಾ ಅವರದ್ದು ಲವ್ ಮ್ಯಾರೇಜ್. ಇಬ್ಬರೂ ತುಂಬಾ ಆಪ್ತರಾಗಿದ್ದಾರೆ. ಆಗಾಗ್ಗೆ ಡಾನ್ಸ್ ವಿಡಿಯೋಗಳನ್ನು ಶೇರ್ ಮಾಡುತ್ತಿದ್ದರು. ಆದರೆ ಎಲ್ಲಿಯೂ ಪ್ರೀತಿಯ ವಿಚಾರ ಬಿಟ್ಟುಕೊಟ್ಟಿರಲಿಲ್ಲ.
ಮೊನ್ನೆಯಷ್ಟೇ ದುಬೈನಲ್ಲಿ ಶಾಪಿಂಗ್ ಮಾಡಿದ್ದಾರೆ. ಆದರೀಗ ಇಬ್ಬರ ಪ್ರೀತಿ ವಿಚಾರ ಬಹಿರಂಗವಾಗಿದೆ. ಅಂದಹಾಗೆ ಈ ವಿಚಾರ ರಿವೀಲ್ ಆಗಿದ್ದು ಹರಿಪ್ರಿಯಾ ಅವರ ಮೂಗು ಚುಚ್ಚವ ವೇಳೆ. ಇತ್ತೀಚಿಗೆ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದರು. ಅದರ ವೀಡಿಯೋವನ್ನು ಶೇರ್ ಮಾಡಿದ್ದರು. ಆ ವೇಳೆ ಹರಿಪ್ರಿಯಾ ಜೊತೆ ವಸಿಷ್ಠ ಸಿಂಹ ಕೂಡ ಜೊತೆಯಲ್ಲಿದ್ದರು. ಹರಿಪ್ರಿಯಾ ಮೂಗು ಚುಚ್ಚಿಸಿದ್ದೇ ವಸಿಷ್ಠ ಸಿಂಹ ಆಸೆಯಂತೆ ಎಂದು ಹೇಳಲಾಗ್ತಿದೆ.
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಇನ್ನೊಂದು ತಿಂಗಳಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲು ಎಲ್ಲಾ ತಯಾರಿ ಕೂಡ ಮಾಡಿದ್ದಾರಂತೆ. ಅಲ್ಲದೇ ನಿಶ್ಚಿತಾರ್ಥದ ಬಳಿಕ ಅಂದರೆ ಎರಡು ತಿಂಗಳಲ್ಲಿ ಇಬ್ಬರೂ ಹಸೆಮಣೆ ಏರಲಿದ್ದಾರೆ
ಆದರೆ ಜೋಡಿ ಹಕ್ಕಿಗಳಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು