ದಕ್ಷಿಣ ಕಾಶಿ ನಂಜನಗೂಡಿಗೆ ನಟ ಯಶ್ ದಂಪತಿ ಭೇಟಿ

Newsnap Team
1 Min Read
Actor Yash couple visit Dakshina Kashi Nanjangudi ದಕ್ಷಿಣ ಕಾಶಿ ನಂಜನಗೂಡಿಗೆ ನಟ ಯಶ್ ದಂಪತಿ ಭೇಟಿ

ನಂಜನಗೂಡು : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಬುಧವಾರ ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.

ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.ಮಗಳಿಗೆ ಪಿಎಸ್ಐ ಚಾರ್ಜ್ ನೀಡಿದ ತಂದೆ: ಜಿಲ್ಲಾ ಮಂತ್ರಿ ಎನ್.ಚಲುವರಾಯಸ್ವಾಮಿ ಅಭಿನಂದನೆ

ಮೈಸೂರು ಯಶ್ ಅವರ ಹುಟ್ಟೂರು. ಅಲ್ಲದೇ, ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇಷ್ಟದ ಸ್ಥಳಗಳಿಗೆ ಈ ಬಾರಿ ಹೆಂಡತಿ ಮತ್ತು ಹೆಂಡತಿ ಕುಟುಂಬವನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಈ ಬಾರಿ ಮಕ್ಕಳಿಗೂ ತಮ್ಮ ಹುಟ್ಟೂರು ತೋರಿಸಿದ್ದಾರೆ ರಾಕಿಂಗ್ ಸ್ಟಾರ್.

Share This Article
Leave a comment