ನಟಿ, ರಾಜಕಾರಣಿ ರೋಜಾ ಯುವಕರೊಂದಿಗೆ ಕಬಡ್ಡಿ ಆಡಿ ಎಲ್ಲರ ಗಮನ ಸೆಳೆದರು.
ಆಂಧ್ರಪ್ರದೇಶದಲ್ಲಿ ನಡೆಯಲಿರುವ ಎರಡು ನಗರಪಾಲಿಕೆ ಚುನಾವಣೆ ಪ್ರಚಾರದ ವೇಳೆ ಶಾಸಕಿ ಹಾಗೂ ಆಂಧ್ರಪ್ರದೇಶ ಕೈಗಾರಿಕಾ ಮೂಲಸೌಕರ್ಯ ನಿಗಮ ಮಂಡಳಿ ಅಧ್ಯಕ್ಷೆ ಆಗಿರುವ ರೋಜಾ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಸ್ಥಳಿಯ ನಾಯಕರು ಮತ್ತು ಪುತ್ತೂರ್ ಮುನ್ಸಿಪಾಲಿಟಿ ನಾಯಕರ ಜತೆ ಓಡಾಡಿ ತಮ್ಮ ಬೆಂಬಲಿಗರಿಗೆ ಮತ ಹಾಕುವಂತೆ ಮನವಿ ಮಾಡಿದರು.
ಪ್ರಚಾರಕ್ಕೆಂದು ಹೋದವೇಳೆ ಚಿತ್ತೂರ್ ಜಿಲ್ಲೆಯ ನಿಂದ್ರಾದಲ್ಲಿರುವ ಶಾಲೆಯಲ್ಲಿ ಕಬಡ್ಡಿ ಟೂರ್ನಮೆಂಟ್ ಆಯೋಜಿಸಲಾಗಿತ್ತು.
ಈ ಟೂರ್ನಮೆಂಟ್ ಬಳಿ ಹೋದ ರೋಜಾ, ಆಟಗಾರರನ್ನು ಹುರಿದುಂಬಿಸಲು ಸೀರೆ ಎತ್ತಿ ಸೊಂಟಕ್ಕೆ ಕಟ್ಟಿಕೊಂಡು ಕಬಡ್ಡಿ ಅಖಾಡಕ್ಕಿಳಿದಿದ್ದಾರೆ.
ಕಬಡ್ಡಿ..ಕಬಡ್ಡಿ ಎನ್ನುತ್ತಾ ಕೆಲಕಾಲ ಆಟವಾಡಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಸದಾ ಟೀಕಿಸುವ ಮೂಲಕವಾಗಿ ಸುದ್ದಿಯಾಗುವ ನಟಿ ಇದೀಗ ಕಬಡ್ಡಿ ಆಟವನ್ನು ಆಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು