- ನನ್ನ ಮಗಳ ಸಾವಿಗೆ ತೆಲುಗು ನಟ ವಿವೇಕ್ ನೇರ ಕಾರಷ ಸೌಜನ್ಯ ತಂದೆ ದೂರು
- ಪಿಎ ಮಹೇಶ್ ವಶ ಪಡೆದು ವಿಚಾರಣೆ ಆರಂಭಿಸಿದ ಪೋಲಿಸರು
ಕಿರುತೆರೆ ನಟಿ ಸವಿ (ಸೌಜನ್ಯ) ಮಾದಪ್ಪ ಆತ್ಮಹತ್ಯೆಗೆ ತೆಲುಗು ನಟ ವಿವೇಕ್ ಹಾಗೂ ಸವಿ ಪಿಎ ಮಹೇಶ್ ಕಾರಣ ಎಂದು ನಟಿ ತಂದೆ ಮಾದಪ್ಪ ನೀಡಿರುವ ದೂರಿನ ಅನ್ವಯ ಎಫ್ ಐ ಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳಗೋಡು ಪೊಲೀಸರು ತನಿಖೆಯನ್ನು ಚುರುಕು ಗೊಳಿಸಿ, ಪಿಎ ಮಹೇಶ್ ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಇಬ್ಬರು ಅನುಮಾನಿತರ ವಿರುದ್ದ ಕುಂಬಳಗೋಡು ಪೊಲೀಸರು ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಕೇಸ್ ದಾಖಲು ಮಾಡಿ, ದೂರಿನನ್ವಯ ವಿವೇಕ್ ನಂ.1 ಆರೋಪಿ ಹಾಗೂ ಮಹೇಶ್ ನಂ.2 ಆರೋಪಿಯಾಗಿದ್ದಾರೆ.
ಮದುವೆ ಆಗದೇ ಹೋದರೆ ಕೊಲೆ ಮಾಡುವೆ – ವಿವೇಕ್
ನಟಿ ಸೌಜನ್ಯ ಮಾದಪ್ಪ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ. ನನ್ನ ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು.
ಒಂದು ವರ್ಷದ ಹಿಂದೆ ಕುಂಬಳಗೋಡು ಬಳಿಯ ಸನ್ವರ್ಥ್ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದಳು.
ಈ ವೇಳೆ ನನ್ನ ಮಗಳು ಸೌಜನ್ಯ ಳಿಗೆ ವಿವೇಕ್ ಎಂಬುವನ ಪರಿಚಯ ವಾಗಿತ್ತು. ವಿವೇಕ್ ನನ್ನ ಮಗಳನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಪೀಡಿಸುತ್ತಿದ್ದ. ಈ ವಿಚಾರವನ್ನು ಮಗಳು ಸೌಜನ್ಯ, ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದಳು.
ಪತ್ನಿ ಗೆ ಫೋನ್ ಮಾಡಿ ಬೆದರಿಕೆ :
ಸೆಪ್ಟೆಂಬರ್ 30ರಂದು ವಿವೇಕ್ ನನ್ನ ಪತ್ನಿ ರೇಣುಕಾಗೆ ಬೆಳಗ್ಗೆ 9ಕ್ಕೆ ಫೋನ್ ಮಾಡಿದ್ದ. ಇದಾದ ಒಂದು ಗಂಟೆ ನಂತರ ನನ್ನ ದೊಡ್ಡ ಮಗಳು ಭಾಗ್ಯಶ್ರೀ ಕರೆಮಾಡಿ, ಸವಿ ಸತ್ತು ಹೋಗಿದ್ದಾಳೆ ಎಂದು ತಿಳಿಸಿದ್ದಾಳೆ.
ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ. ನನ್ನ ಮಗಳ ಬಳಿ 6 ಲಕ್ಷ ರೂ. ಹಣವಿತ್ತು. ಎರಡು ದಿನಗಳ ಹಿಂದೆ 1 ಲಕ್ಷ ರೂ.ಗಳನ್ನು ಕಳುಹಿಸಿದ್ದೆ. ನನ್ನ ಮಗಳ ಜೊತೆಯಲ್ಲಿದ್ದ ವಿವೇಕ್ ಹಾಗೂ ಮಹೇಶ್ ಕಿರುಕುಳ ತಾಳಲಾರದೆ ಸೆಪ್ಟೆಂಬರ್ 30ರಂದು 10:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೀಗಾಗಿ ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ