ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್

Team Newsnap
1 Min Read
Actress Shruti Hariharan twist again in Metoo case ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್

ಬೆಂಗಳೂರು: 2018 ರಲ್ಲಿ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಅರ್ಜುನ್ ಸರ್ಜಾ ಪರ ಹಾಕಲಾಗಿದ್ದ ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಅರ್ಜುನ್ ಸರ್ಜಾ ವಿರುದ್ಧ ಸೂಕ್ತ ಸಾಕ್ಷಾಧಾರವಿಲ್ಲ ಎಂದು ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು.ಜೂನ್ 11ರಂದು ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದು –

ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಶ್ರುತಿ ಹರಿಹರನ್ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು, ಶ್ರತಿ ಹರಿಹರನ್ ಹಾಗೂ ಪೊಲೀಸರಿಗೆ ಕೋರ್ಟ್ ನೋಟೀಸ್ ನೀಡಿದೆ.

Share This Article
Leave a comment