ಹೋಟೆಲ್ ವಾಶ್ ರೂಂನಲ್ಲಿ ಅವಿತು ಕುಳಿತಿದ್ದ ನಟಿ ಸೋನಿಯಾ ಪೋಲಿಸರ ವಶಕ್ಕೆ

Team Newsnap
0 Min Read

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ಇದ್ದ ಸೋನಿಯಾಳನ್ನು ವಶಕ್ಕೆ ಪಡೆದಿದ್ದರು. ಕೊಠಡಿಯ ವಾಶ್ ರೂಮ್ ನಲ್ಲಿ ಅವಿತು ಕುಳಿತಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಮಧ್ಯಾಹ್ನ ಹೋಟೆಲಿಗೆ ಹೋಗಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.

ಇಂದು ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು.

Share This Article
Leave a comment