February 21, 2026

Newsnap Kannada

The World at your finger tips!

viji

ಫೈವ್ ಸ್ಟಾರ್ ಹೋಟೆಲ್ ನಲ್ಲಿ ನಟಿ ವಿಜೆ ಚಿತ್ರಾ ಆತ್ಮಹತ್ಯೆ

Spread the love

ತಮಿಳು ಕಿರುತೆರೆ ನಟಿ ವಿಜೆ ಚಿತ್ರಾ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಟಿ ವಿಜೆ ಚಿತ್ರಾ ಧಾರಾವಾಹಿ ಚಿತ್ರೀಕರಣ ಮುಗಿಸಿ ರಾತ್ರಿ 2. 30 ಸುಮಾರಿಗೆ ಹೋಟೆಲ್ ಗರ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ವಿಜಿ ಚಿತ್ರಾ ಮೃತದೇಹ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಮಿಳುನ ಜನಪ್ರಿಯ ಧಾರಾವಾಹಿ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಬಂದ ನಂತರ ಚಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಉದ್ಯಮಿ ಹೇಮಂತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಟಿ ಚಿತ್ರಾ ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಎನ್ನಲಾಗಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಕ್ರಿಯಾಶೀಲವಾಗಿದ್ದ ವಿಜಿ ತಮ್ಮ ಫೋಟೋ ಗಳನ್ನು ಹಂಚಿಕೊಂಡು ಅಭಿಮಾನಿಗಳ ಬಳಗವನ್ನು ಸೃಷ್ಟಿ ಮಾಡಿದ್ದರು.

error: Content is protected !!