ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮನೆಯ ಸ್ಫೋಟಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2022 ಜನವರಿ 6 ರಂದು ಮಹಾರಾಷ್ಟ್ರದ ಪೊಲೀಸ್ ಕಂಟ್ರೋಲ್ ರೂಮ್‍ಗೆ ಫೋನ್ ಕರೆ ಮಾಡಿದ್ದನು.
ಈ ವೇಳೆ ಶಾರೂಖ್ ಅವರ ಬಂಗಲೆಯನ್ನು ಸ್ಫೋಟ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದನು.
ಈ ಪ್ರಕರಣದ ತನಿಖೆ ಮಾಡಿದ ಮುಂಬೈ ಪೊಲೀಸರ ಬಲೆಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ.
ಜಿತೇಶ್ ಬಂಧಿತ ಆರೋಪಿಯಾಗಿದ್ದಾನೆ. ಈತನ ಫೋನ್ ನಂಬರ್ ಟ್ರೆಸ್ ಮಾಡಿದಾಗ ಮಧ್ಯಪ್ರದೇಶದ ಜಬಲ್‍ಪುರದಿಂದ ಕರೆ ಬಂದಿರುವುದು ಪತ್ತೆಯಾಗಿದೆ.
ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು, ಮಧ್ಯಪ್ರದೇಶದ ಜಬಲ್‍ಪುರದಲ್ಲಿಯೇ ಆರೋಪಿಯನ್ನು ಬಂಧಿಸಿದ್ದಾರೆ.
ಮುಂಬೈನ ವಿವಿಧೆಡೆ ಭಯೋತ್ಪಾದಕ ದಾಳಿ ಹಾಗೂ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ. ಆರೋಪಿಯ ವಿರುದ್ಧ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್