ರಾಷ್ಟ್ರೀಯ ಭದ್ರತಗೆ ‘ಡ್ರೋನ್ ಸಮೂಹ’ ಸೇರ್ಪಡೆ

Team Newsnap
0 Min Read

ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಡ್ರೋನ್‌ಗಳ ಸಮೂಹ’ ವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ.

ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಮೂಲಗಳು ಹೇಳಿವೆ

ಡ್ರೋನ್‌ಗಳ ಸಮೂಹ’ವು ನಿರ್ದಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ.ಈ ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ ನಿಯಂತ್ರಿಸಲಾಗುತ್ತದೆ.

ಯಾವುದೇ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಕೆಲವು ಡ್ರೋನ್‌ಗಳು ಕಾರ್ಯ ನಿಲ್ಲಿಸಿದರೂ,ಸಮೂಹ’ವು ತನ್ನ ಕಾರ್ಯವನ್ನು ಪೂರ್ಣಗೊಳಿಸಿ ಹಿಂದಿರುಗುತ್ತದೆ’ ಎಂದು ಸೇನೆಯ ಸಾರ್ವಜನಿಕ ಮಾಹಿತಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶನಾಲಯ ಇಂದು ಟ್ವೀಟ್ ಮಾಡಿದೆ.

Share This Article
Leave a comment