ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿ ವಿತರಣೆ: ಸಚಿವ ಕೆ.ಹೆಚ್‌ ಮುನಿಯಪ್ಪ

Team Newsnap
1 Min Read

ಬೆಂಗಳೂರು : ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುನಿಯಪ್ಪ ಕೇಂದ್ರ ಸರ್ಕಾರವು ಹೆಚ್ಚುವರಿ ಅಕ್ಕಿ ನೀಡುವುದಕ್ಕೆ ಸಹಕಾರವನ್ನು ನೀಡುತ್ತಿಲ್ಲ, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಮುಂದಾಗಿದೆ, ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದರ ನಿಗದಿಯಾಗಲಿದೆ, ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಆಗಸ್ಟ್‌ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುವುದು ಅಂತ ತಿಳಿಸಿದರು.

ಕೇಂದ್ರ ಸರ್ಕಾರದಿಂಧ ಹೆಚ್ಚುವರಿ ಅಕ್ಕಿಯನ್ನು ಪಡೆದುಕೊಳ್ಳುವುದಾಕ್ಕಾಗಿ ಸಿಎಂ ಸೇರಿದಂತೆ ಹಲವು ನಾಯಕರುಗಳು ನವದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಆದರೆ ಅವರಿಂಧ ಯಾವುದೇ ಸಕಾರತ್ಮಕ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ ನಾಯಕರುಗಳು ಕಿಡಿಕಾರುತ್ತಿದ್ದು, ಅನ್ನದಲ್ಲಿ ರಾಜಕೀಯ ಮಾಡಬಾರದು ಅಂತ ವಾಗ್ದಾಳಿ ನಡೆಸುತ್ತಿದ್ದಾರೆ.ಎಲ್ಲ ಠಾಣೆಗಳಲ್ಲಿ ಸೈಬರ್ ವಿಭಾಗ

ಕಾಂಗ್ರೆಸ್‌ ಸರ್ಕಾರ ಚುನಾವಣೆಯಲ್ಲಿ ನೀಡಿದ ಅಶ್ವಾಸನೆಯಂತೆ ಪ್ರತಿ ಕುಟುಂಬಕ್ಕೆ ಕೇಂದ್ರದ ಐದು ಕೆಜಿ ಅಕ್ಕಿ ಜೊತೆಗೆ ರಾಜ್ಯದಿಂದ ಐದುಕೆಜಿ ಒಟ್ಟು ಹತ್ತು ಕೆಜಿ ಅಕ್ಕಿ ನೀಡುವುದಾಗಿ ಹೇಳಿತ್ತು, ಆದರೆ ಈಗ ಅಕ್ಕಿ ನೀಡುವುದರಲ್ಲಿ ವಿಳಂಬವಾಗುತ್ತಿದೆ.

Share This Article
Leave a comment