ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ದೂರು ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಹಾಗೂ ಅವರ ಆಪ್ತ ಸುರೇಶ್ ಬಾಬು ವಿರುದ್ಧ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇರೆಗೆ ದೂರು ಸಲ್ಲಿಕೆಯಾಗಿದ್ದು, ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೂಲತಃ ಎಸ್‌ಐಟಿಯಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲೂ ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯ ಸಂಗ್ರಹ ನಡೆಯುತ್ತಿದೆ. ಈ ಸಂಬಂಧ ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು ಎಂದು ತಿಳಿದುಬಂದಿದೆ.ಇದನ್ನು ಓದಿ –ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
ಈ ಪ್ರಕರಣದ ವಿಚಾರಣೆಗಾಗಿ ಎಡಿಜಿಪಿ ಚಂದ್ರಶೇಖರ್ ಕೋರ್ಟ್ ಮೊರೆ ಹೋಗಿದ್ದರು, ಹಾಗೂ ಕೋರ್ಟ್ ಆದೇಶದ ಮೇರೆಗೆ ಇದೀಗ ಎಫ್‌ಐಆರ್ ದಾಖಲಿಸಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ