ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ, ಎಸ್‌ಪಿ ಅನುಮತಿ ಕೊಟ್ಟಿಲ್ಲ. ಈ ಸಂಬಂಧ ಪಕ್ಷದ ಶಾಸಕರು, ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಮಡಿಕೇರಿ ಚಲೋ ಮುಂದೂಡುತ್ತೇವೆ. ಕಾನೂನು ಉಲ್ಲಂಘನೆ ಮಾಡಲ್ಲ ಎಂದು ತಿಳಿಸಿದರು. ಇದನ್ನು ಓದಿ – ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ
ಅತಿವೃಷ್ಟಿ ಹಾನಿ ಪರಿಶೀಲನೆಗೆ ಕೊಡಗಿಗೆ ಹೋಗಿದ್ದಾಗ ಕೆಲವರು ಕೋಳಿ ಮೊಟ್ಟೆ ಎಸೆದರು. ಆಗ ಪೊಲೀಸರು ಮಾತ್ರ ಸುಮ್ಮನೆ ನಿಂತಿದ್ದರು, ಏನೂ ಮಾಡಲಿಲ್ಲ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿದ್ರೆ ಹೊರತು ಬಿಜೆಪಿ, ಭಜರಂಗದಳ ಕಾರ್ಯಕರ್ತರ ಮೇಲೆ ಏನೂ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ದೂರಿದರು.
ಕೊಡಗಿಗೆ ಬರಲಿ ನಾವು ನೋಡ್ಕೋತೀವಿ ಅಂತಾ ಬೋಪಯ್ಯ ಹೇಳ್ತಾರೆ. ನಾವೇನು ಸ್ವಾತಂತ್ರ್ಯ ಭಾರತದಲ್ಲಿ ಇದ್ದೇವಾ? ನನಗೆ ಸವಾಲು ಹಾಕ್ತಾರೆ ಇವರು. ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿ ಅವರ ಆಟಾಟೋಪದ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಬಿಜೆಪಿ ಜನಜಾಗೃತಿ ಸಮಾವೇಶ ಮಾಡಲು ಹೊರಟಿದ್ದು ದ್ವೇಷದಿಂದ. ನಾನು ಮಡಿಕೇರಿ ಚಲೋ ಘೋಷಣೆ ಮಾಡಿದ ಬಳಿಕ ಅದರ ಮಾರನೇ ದಿನ ಬಿಜೆಪಿ ಅವರು ಘೋಷಣೆ ಮಾಡಿದ್ರು. ನಮ್ಮ ಮೇಲೆ ಕುಟಿಲ ಪ್ರಯತ್ನ ಮಾಡಿ ಷಡ್ಯಂತ್ರ ಮಾಡಿದ್ದಾರೆ ಎಂದು ಟೀಕಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು