ಆ. 26 ರ ಮಡಿಕೇರಿ ಚಲೋ ಮುಂದೂಡಿಕೆ – ಸಿದ್ದರಾಮಯ್ಯ

Team Newsnap
1 Min Read
Pic Credits : deccanherald.com

ಆಗಸ್ಟ್‌ 26ಕ್ಕೆ ಕರೆ ನೀಡಿದ್ದ ಮಡಿಕೇರಿ ಚಲೋ ಕಾರ್ಯಕ್ರಮ ನಡೆಸುವುದಿಲ್ಲ ವಿರೋಧ ಪಕ್ಷದ ನಾಯಕನಾಗಿ ನಾನು ಕಾನೂನು ಉಲ್ಲಂಘನೆ ಮಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳಾರ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ, ಎಸ್‌ಪಿ ಅನುಮತಿ ಕೊಟ್ಟಿಲ್ಲ. ಈ ಸಂಬಂಧ ಪಕ್ಷದ ಶಾಸಕರು, ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಮಡಿಕೇರಿ ಚಲೋ ಮುಂದೂಡುತ್ತೇವೆ. ಕಾನೂನು ಉಲ್ಲಂಘನೆ ಮಾಡಲ್ಲ ಎಂದು ತಿಳಿಸಿದರು. ಇದನ್ನು ಓದಿ – ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ

ಅತಿವೃಷ್ಟಿ ಹಾನಿ ಪರಿಶೀಲನೆಗೆ ಕೊಡಗಿಗೆ ಹೋಗಿದ್ದಾಗ ಕೆಲವರು ಕೋಳಿ ಮೊಟ್ಟೆ ಎಸೆದರು. ಆಗ ಪೊಲೀಸರು ಮಾತ್ರ ಸುಮ್ಮನೆ ನಿಂತಿದ್ದರು, ಏನೂ ಮಾಡಲಿಲ್ಲ. ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ರೆ ಹೊರತು ಬಿಜೆಪಿ, ಭಜರಂಗದಳ ಕಾರ್ಯಕರ್ತರ ಮೇಲೆ ಏನೂ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ದೂರಿದರು.

politics

ಕೊಡಗಿಗೆ ಬರಲಿ ನಾವು ನೋಡ್ಕೋತೀವಿ ಅಂತಾ ಬೋಪಯ್ಯ ಹೇಳ್ತಾರೆ. ನಾವೇನು ಸ್ವಾತಂತ್ರ್ಯ ಭಾರತದಲ್ಲಿ ಇದ್ದೇವಾ? ನನಗೆ ಸವಾಲು ಹಾಕ್ತಾರೆ ಇವರು. ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿ ಅವರ ಆಟಾಟೋಪದ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಬಿಜೆಪಿ ಜನಜಾಗೃತಿ ಸಮಾವೇಶ ಮಾಡಲು ಹೊರಟಿದ್ದು ದ್ವೇಷದಿಂದ. ನಾನು ಮಡಿಕೇರಿ ಚಲೋ ಘೋಷಣೆ ಮಾಡಿದ ಬಳಿಕ ಅದರ ಮಾರನೇ ದಿನ ಬಿಜೆಪಿ ಅವರು ಘೋಷಣೆ ಮಾಡಿದ್ರು. ನಮ್ಮ ಮೇಲೆ ಕುಟಿಲ ಪ್ರಯತ್ನ ಮಾಡಿ ಷಡ್ಯಂತ್ರ ಮಾಡಿದ್ದಾರೆ ಎಂದು ಟೀಕಿಸಿದರು.

Share This Article
Leave a comment