ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೈ ಮುಗಿದು ಮನವಿ ಮಾಡುತ್ತೇನೆ, ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆಯಿರಿ ಎಂದು ಬಸವಪ್ರಭು ಶ್ರೀಗಳು ಮನವಿ ಮಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಬಸವಪ್ರಭು ಶ್ರೀಗಳು ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನೇಮಕ ಮಾಡಿರುವ ಆಡಳಿತಾಧಿಕಾರಿ ನಿಯೋಜನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಡಿ.26ರಂದು ಮಠಾಧೀಶರಿಂದ ಧರಣಿಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು. ಜಾಮಿಯಾ ಮಸೀದಿಯಲ್ಲಿ : ಅಕ್ರಮ ಮದರಸಾ : ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು
ಮುರುಘಾಮಠಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.
ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಿದ್ದರು.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು