ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದು ಸಹಕಾರ ಸಚಿವರು, ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಗಾಂಧಿ ಜಯಂತಿ ಅಂಗವಾಗಿ ಮೈಸೂರಿನ ಗಾಂಧಿ ಸ್ಕ್ವೇರ್ ನಲ್ಲಿ ಗಾಂಧಿ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿ ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್‌ಸೇಠ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮತ್ತಿತರರು ಇದ್ದರು. ಗಾಂಧಿ ಜಯಂತಿ ಅಂಗವಾಗಿ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಪ್ರಾರ್ಥನಾ ಸಭೆಯಲ್ಲಿ ಸೋಮಶೇಖರ್ ಭಾಗವಹಿಸಿದ್ದರು.
ಗೌರವ ಸಲ್ಲಿಕೆ: ಮೈಸೂರಿನ ರೈಲ್ವೆ ಕ್ರೀಡಾ ಮೈದಾನದ ಬಳಿ ಇರುವ ಗಾಂಧಿ ವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೈಋತ್ಯ ವಲಯ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಅವರು ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ನಂತರ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ರೈಲು ಪ್ರಯಾಣಿಕರಿಗೆ ಬಟ್ಟೆಯ ಚೀಲಗಳನ್ನು ವಿತರಿಸಲಾಯಿತು. ಇದೇ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿ ರೈಲ್ವೆ ನಿಲ್ದಾಣದಲ್ಲಿ ನಡೆದ “ಶ್ರಮದಾನ’ದಲ್ಲಿ ಭಾಗವಹಿಸಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ