Karnataka

ವಿಧಾನಸಭೆಯಲ್ಲಿ 10 ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿ: ಸ್ಪೀಕರ್ ಗೆ ಸಚಿವ ಎಸ್.ಟಿ.ಎಸ್ ಪತ್ರ

ವಿಧಾನಸಭೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ 10 ನೇ ಚಾಮರಾಜ ಒಡೆಯರ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ವಿಧಾನಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಧಾನ ಪರಿಷತ್ ನಲ್ಲಿ , ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಅಳವಡಿಸಿರುವ ಕ್ರಮವನ್ನು ಸ್ವಾಗತಿಸಿರುವ ಸಚಿವ ಎಸ್.ಟಿ.ಸೋಮಶೇಖರ್ ಅವರು, ರಾಜ್ಯದ ಹೆಸರನ್ನು ಉತ್ತುಂಗಗಕ್ಕೆ ತಂದ ಅನೇಕ ಮಹನೀಯರನ್ನು ನಾವು ಇಂದು ನೆನೆಯಬೇಕಿದೆ ಎಂದು ಹೇಳಿದ್ದಾರೆ.

ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದ
ಮೈಸೂರು ಮಹಾಸಂಸ್ಥಾನದ ರಾಜರು. ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಕಾರಣರಾದವರ ಭಾವಚಿತ್ರವನ್ನು ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಯಲ್ಲಿ ಅಳವಡಿಸಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ‌.

ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು, 10ನೇ ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ ಈ ಸಭೆಯನ್ನು ನಡೆಸಿ, ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಹಾಕಿಕೊಟ್ಟವರು ನಾಲ್ವಡಿ ಅವರು.

ಅಲ್ಲದೆ, ಇವರು ಕೃಷ್ಣರಾಜ ಸಾಗರ ಅಣೆಕಟ್ಟು, ಹೊಸ ರೈಲು ಸಂಪರ್ಕಕ್ಕೆ ಮಾರ್ಗಗಳು, ಸಾಮಾಜಿಕ ಕಾನೂನುಗಳ ಜಾರಿ ಸೇರಿದಂತೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇಂಥ ಮಹನೀಯರನ್ನು ಗೌರವಿಸುವ ಮೂಲಕ ಆ ಭಾಗಕ್ಕೆ ಮನ್ನಣೆಯನ್ನು ಕೊಡಬೇಕಿದೆ ಎಂದು ಸಚಿವರು ಮನವಿ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024