ಇ-ಪಾಸ್‌ಪೋರ್ಟ್‌ನಲ್ಲಿರಲಿದೆ ಸುಧಾರಿತ ಭದ್ರತಾ ವೈಶಿಷ್ಟ್ಯ

Team Newsnap
0 Min Read

ಕೇಂದ್ರ ಸರ್ಕಾರ ಈ ವರ್ಷ ಇ-ಪಾಸ್‌ಪೋರ್ಟ್‌ಗಳನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಜೆಟ್‌ನಲ್ಲಿ ಪ್ರಕಟಿಸಿದ ಬೆನ್ನಲ್ಲೇ ಸುಧಾರಿತ ಭದ್ರತಾ ವೈಶಿಷ್ಟ್ಯ ಇರಲಿದೆ.

ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್(ಆರ್‌ಎಫ್‌ಐಡಿ) ಚಿಪ್‌ನಂತಹ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಇ-ಪಾಸ್‌ಪೋರ್ಟ್‌ಗಳನ್ನು ಹೊರತರಲು ಯೋಜನೆ ನಡೆಸಿದೆ.

ಪಾಸ್‌ಪೋರ್ಟ್ ಬುಕ್‌ಲೆಟ್‌ನಲ್ಲಿ ಚಿಪ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

Share This Article
Leave a comment