ಸದನದಲ್ಲಿ ರೋಹಿಣಿ ಸಿಂಧೂರಿ ಖರೀದಿಸಿದ್ದ ಬ್ಯಾಗ್ ಪ್ರದರ್ಶನ ಮಾಡಿದ ಶಾಸಕ ಸಾ ರಾ ಮಹೇಶ್ ಸಿಂಧೂರಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ , ಕೆಲವರು ಮಹಿಳಾ ಅಧಿಕಾರಿಗಳು ಅನ್ನೋದನ್ನೇ ಅಡ್ವಾಂಟೇಜ್ ಮಾಡಿಕೊಂಡಿ ದ್ದಾರೆಂದು ಹೇಳಿದರು.
ವಿಧಾನಸಭೆ ಅಧಿವೇಶನ ದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕೆಲವು ಅಧಿಕಾರಿಗಳು ಮಾತ್ರ ಭ್ರಷ್ಟರಾಗಿ ಬದುಕುತ್ತಿದ್ದಾರೆ. ಕೇವಲ ಒಂದು ಬ್ಯಾಗ್ ವಿಚಾರದಲ್ಲಿ ಆರೂವರೆ ಕೋಟಿ ರೂಪಾಯಿ ನುಂಗಿದ್ದಾರೆ. ಎಂದು ಜೇಬಿನಲ್ಲಿ ಬ್ಯಾಗ್ ಇಟ್ಟುಕೊಂಡು ಬಂದಿದ್ದ ಮಹೇಶ್, ಸದನದಲ್ಲಿ ಬ್ಯಾಗ್ ಪ್ರದರ್ಶನ ಮಾಡಿ ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
20 ವರ್ಷದಿಂದ 40 ವರ್ಷದೊಳಗಿನ ಮಹಿಳಾ ಅಧಿಕಾರಿಗಳು ಇದ್ದರೆ ನಮ್ಮವರೇ ನಮಗೆ ವಿಲನ್ ಆಗುತ್ತಾರೆ. ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ ಆಗಿದೆ ಎಂದು ಸಾ.ರಾ ಮಹೇಶ್ ನುಡಿದರು.
ವಿಧಾನಸಭಾ ಅಧಿವೇಶನದಲ್ಲಿ ಪಿಡಿ ಖಾತೆಗಳ ಬಗ್ಗೆ ಎಚ್.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡುತ್ತಿದ್ದಂತೆ ಎದ್ದು ನಿಂತು ಸಾ.ರಾ ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಲು ಪ್ರಾರಂಭಿಸಿದರು. ಕೆಲ ಅಧಿಕಾರಿಗಳು ಜನರ ತೆರಿಗೆ ಹಣದಲ್ಲಿ ಶೋಕಿ ಮಾಡಿಕೊಂಡು ಬದುಕುತ್ತಿದ್ದಾರೆ. ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ರೂ. ಅಕ್ರಮ ನಡೆದಿದೆ. ಆ ಅಧಿಕಾರಿ ಮೈಸೂರಿನಲ್ಲಿ ಲೂಟಿ ಮಾಡಿದ್ದಾರೆ ಎಂದು ಹೆಸರು ಹೇಳದೇ ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ ಮಹೇಶ್ ಕಿಡಿ ಕಾರಿದರು.
ಕಲಾಪದಲ್ಲಿ ರೋಷಾವೇಶದಿಂದ ಮಾತನಾಡಿದ ಸಾ.ರಾ ಮಹೇಶ್, ಇಂಥ ಅಧಿಕಾರಿಗಳಿಂದ ನಮ್ಮ ರಕ್ಷಣೆಗೆ ಬನ್ನಿ. ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳುವ ತಾಕತ್ ಇದ್ಯಾ? ಐಎಎಸ್, ಐಪಿಎಸ್ ಮನೆಗಳ ಮೇಲೆ ಐಟಿ ರೇಡ್ ಆಗುತ್ತಾ? ಎಂಜಿನಿಯರ್, ಸಣ್ಣಪುಟ್ಟ ಅಧಿಕಾರಿಗಳ ಮೇಲೆ ಮಾತ್ರ ಐಟಿ ರೇಡ್ ಆಗುತ್ತದೆ ಎಂದು ಸದನದಲ್ಲಿ ಪ್ರಶ್ನೆ ಮಾಡಿದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ