ಶ್ರೀರಂಗಪಟ್ಟಣದಲ್ಲಿ ಮಲೇರಿಯಾ ಬಗ್ಗೆ ಶಿಕ್ಷಕರಿಗೆ ಅಡ್ವೋಕೆಸಿ ಕಾರ್ಯಾಗಾರ

Team Newsnap
2 Min Read

ಶ್ರೀರಂಗಪಟ್ಟಣ :

ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಮಲೇರಿಯ, ಡೆಂಗಿ, ಚಿಕೂನ್ ಗುನ್ಯ, ಮೆದುಳು ಜ್ವರ, ಜಿಕ್ ಹಾಗೂ ಆನೆ ಕಾಲು ರೋಗಗಳ ನಿಯಂತ್ರಣ ಸಾಧ್ಯ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಎನ್ ಕಾಂತರಾಜು ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿಗೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಮಲೇರಿಯಾ ವಿರೋಧಿ ಮಾಸಾಚರಣೆ 2023” ಕಾರ್ಯಕ್ರಮದಡಿಯಲ್ಲಿ ಶಾಲಾ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಮಲೇರಿಯಾ ಕುರಿತು ಅಡ್ವೋಕೇಸಿ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ ಕಾಯಿಲೆ, ಡೆಂಗಿ ಜ್ವರ, ಚಿಕೂನ್ ಗುನ್ಯಾ ,ಮೆದುಳು ಜ್ವರ ಹಾಗೂ ಆನೆಕಾಲು ರೋಗಗಳ ಲಕ್ಷಣಗಳು ಹರಡುವಿಕೆ ,ಮುಂಜಾಗ್ರತಾ ಕ್ರಮಗಳು ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಪಿಪಿಟಿ ಮೂಲಕ ವಿವರಿಸಿದರು.

ನಂತರ ತಾಲೂಕು ಆರೋಗ್ಯ ಅಧಿಕಾರಿ ಡಾ. ಎನ್ ಕೆ ವೆಂಕಟೇಶ್ ಮಾತನಾಡಿ 2025ರ ವೇಳೆಗೆ ಮಲೇರಿಯ ಮುಕ್ತ ಭಾರತ ಮಾಡಲು ಈಗಿನಿಂದಲೇ ಅಗತ್ಯ ಕ್ರಮಗಳನ್ನು ಜರುಗಿಸಿ ಮೊದಲು ಮಲೇರಿಯಾ ಮುಕ್ತ ತಾಲೂಕನ್ನಾಗಿ ಘೋಷಣೆ ಮಾಡಲು ಎಲ್ಲರೂ ಶ್ರಮಿಸಬೇಕೆಂದು ಶಿಕ್ಷಕರಿಗೆ ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಲಾರ್ವ ಹಾಗೂ ಲಾರ್ವಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬುಸಿಯ ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಲಾಯಿತು.

ಇದೆ ವೇಳೆ ಕಾರ್ಯಾಗಾರಕ್ಕೆ ಹಾಜರಾದ ಎಲ್ಲಾ ಶಿಕ್ಷಕರುಗಳಿಗೆ ಸೊಳ್ಳೆಗಳಿಂದ ಹರಡುವ ರೋಗಗಳ ಉಪಯುಕ್ತ ಮಾಹಿತಿ ಹೊಂದಿರುವ ಕೈಪಿಡಿಯನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ ಪಿ ಮಾರುತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ವೇಣುಗೋಪಾಲ್, ತಾಲೂಕು ದೈಹಿಕ ಶಿಕ್ಷಣ ಸಂಯೋಜಕ ಸೋಮಶೇಖರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಮೇಲ್ವಿಚಾರಕ ಶಿವಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೆಗೌಡ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ, ತಾಲೂಕು ಮಹಿಳಾ ಆರೋಗ್ಯ ಸಂದರ್ಶಕಿ ಬಿ ಮಂಗಳ ಹಾಗೂ ತಾಲೂಕಿನ ಕಿರಿಯ ,ಹಿರಿಯ ಪ್ರಾಥಮಿಕ ಪ್ರೌಢ ಶಾಲೆಯ ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಕರುಗಳು ಹಾಜರಿದ್ದರು.

Share This Article
Leave a comment