ಪುನೀತ್ 2 ಗಂಟೆಗಳ ಜಿಮ್ ನಲ್ಲಿ ಕಸರತ್ತು ಮಾಡಿದ್ದಾರೆ. ತೀವ್ರ ಹೃದಯಾಘಾತವಾಗಿದೆ.
ಆಸ್ಪತ್ರೆಯಲ್ಲಿ ವೈದ್ಯರು ಸತತ 3 ಗಂಟೆಗಳ ಕಾಲ ಚಿಕಿತ್ಸೆ ನೀಡಿದ್ದರೂ ವೈದ್ಯರ ಪ್ರಯತ್ನಕ್ಕೆ ಪುನೀತ್ ರಾಜ್‍ಕುಮಾರ್ ದೇಹ ಸ್ಪಂದಿಸಲಿಲ್ಲ.
ಪ್ರತಿನಿತ್ಯ ಮಾಡುವಂತೆ ಇಂದೂ ಪುನೀತ್ ಜಿಮ್‍ನಲ್ಲಿ ಕಸರತ್ತು ನಡೆಸಿದ್ದಾರೆ. ಸತತ ಎರಡು ಗಂಟೆ ವ್ಯಾಯಾಮ ಮಾಡಿದ ಬಳಿಕ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿದೆ.
ವಿಕ್ರಂ ಆಸ್ಪತ್ರೆಯ ವೈದ್ಯ ಡಾ. ರಂಗನಾಥ್ ಮಾತನಾಡಿ, ಎದೆ ನೋವು ಎಂದು ಪುನೀತ್ ರಾಜ್‍ಕುಮಾರ್ ಅವರು ಕುಟುಂಬದ ವೈದ್ಯರ ಬಳಿ ಹೋಗಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿದಾಗ ಹೃದಯಾಘಾತವಾಗಿರುವುದು ತಿಳಿದುಬಂದಿದೆ.
ಅಲ್ಲಿಂದ ನೇರವಾಗಿ ವಿಕ್ರಮ ಆಸ್ಪತ್ರೆಗೆ ಪುನೀತ್ ಅವರನ್ನು ಕರೆತರಲಾಗುತ್ತಿತ್ತು. ಮಾರ್ಗ ಮಧ್ಯೆದಲ್ಲಿಯೇ ಅವರಿಗೆ ಹಾರ್ಟ್
ಅಸಿಸ್ಟೋಲ್ (ಹೃದಯದ ಚಲನೆ ನಿಲ್ಲುವುದು) ಆಗಿತ್ತು. ಭಾರೀ ಹೃದಯಾಘಾತವೇ ಆಗಿತ್ತು ಎಂದು ಹೇಳಿದ್ದಾರೆ.
ಆದರೂ ಮೂರು ಗಂಟೆಗಳ ಕಾಲ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ಬದುಕುಳಿಸಲು ನಾನಾ ರೀತಿಯಲ್ಲಿ ಪ್ರಯತ್ನ ಪಟ್ಟೆವು. ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದೆವು. ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ.
ವೈದ್ಯರ ತಂಡ ಸಾಕಷ್ಟು ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಶುಕ್ರವಾರ ಮಧ್ಯಾಹ್ನ 2.30ರ ಹೊತ್ತಿಗೆ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಘೋಷಿಸಲೇಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ