4 ವರ್ಷದ ನಂತರ ಕೆ ಆರ್ ಎಸ್ ಡ್ಯಾಂನಲ್ಲಿ 100 ಅಡಿಗೆ ಕುಸಿದ ನೀರು

Team Newsnap
1 Min Read
heavy rain in Kodagu: Inflow to KRS begins ಕೊಡಗಿನಲ್ಲಿ ವರುಣನ ಅಬ್ಬರ : ಕೆಆರ್ ಎಸ್ ಗೆ ಒಳ ಹರಿವು ಆರಂಭ

ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಡ್ಯಾಂನಲ್ಲಿ 4 ವರ್ಷದ ಬಳಿಕ ನೀರಿನ ಮಟ್ಟ 100 ಅಡಿಗೆ ಕುಸಿತ ಕಂಡಿದೆ.

ಕಳೆದ ವರ್ಷ ಉತ್ತಮ ಮಳೆಯಾದ ಪರಿಣಾಮ ಕೆಆರ್‌ಎಸ್ ಜಲಾಶಯ ಎರಡು ಬಾರಿ ಸಂಪೂರ್ಣ ಭರ್ತಿಯಾಗಿತ್ತು.

ಮಾರ್ಚ್ ಮೂರನೇ ವಾರಕ್ಕೆ ಕೆಆರ್‌ಎಸ್‌ನ ನೀರಿನ ಮಟ್ಟ 100 ಅಡಿಗೆ ತಲುಪಿದೆ.

4 ವರ್ಷದ ಬಳಿಕ ಬೇಗನೆ ಡ್ಯಾಂ ನೀರಿನ ಮಟ್ಟ 100 ಅಡಿಗೆ ಕುಸಿತ ಕಂಡಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ 100 ಅಡಿ ನೀರು ಮಾತ್ರ ಸಂಗ್ರಹವಾಗಿದೆ.

ಡ್ಯಾಂನಲ್ಲಿ ನೀರು 100 ಅಡಿಗೆ ಇಳಿದರೂ ಕೂಡ ಜೂನ್‌ವರೆಗೂ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಒಂದು ವೇಳೆ ಮುಂಗಾರು ಮಳೆ ತಡವಾದರೆ ಕಾವೇರಿ ನೀರಿಗೆ ಅವಲಂಬಿತವಾಗಿರುವ ಜನರಿಗೆ ನೀರಿನ ಹಾಹಾಕಾರ ಎದುರಾಗಬಹುದು.

ಮೇ ತಿಂಗಳ ಅಂತ್ಯಕ್ಕೆ ಕೃಷಿಗೆ ನೀರು ಕೊಡುವುದು ಕಷ್ಟ. ನೀರಿನ ಸಮಸ್ಯೆಯಿಂದಾಗಿ ಡ್ಯಾಂನ ಅಚ್ಚುಕಟ್ಟು ರೈತರಲ್ಲಿ ಸ್ವಲ್ಪ ಆತಂಕ ಎದುರಾಗಬಹುದು.

ಭತ್ತ ಕಾಳುಕಟ್ಟುವ ವೇಳೆಗೆ ನೀರಿನ ಅಭಾವ ಸೃಷ್ಟಿ ಸಾಧ್ಯತೆ ಇದ್ದು, ಮುಂಗಾರು ನಿಗದಿತ ಸಮಯಕ್ಕೆ ಮಳೆ ಸುರಿದರೆ ಕಾವೇರಿ ಕೊಳ್ಳದ ರೈತರಿಗೆ ಹಾಗೂ ಜನರಿಗೆ ನೀರಿನ ಸಮಸ್ಯೆ ಉದ್ಭವಿಸುವುದಿಲ್ಲ.ಇದನ್ನು ಓದಿ –ಕಾಂಗ್ರೆಸ್ ಕಾರ್ಯಕರ್ತನ ಕಪಾಳಮೋಕ್ಷಕ್ಕೆ ಯತ್ನಿಸಿದ ಸಿದ್ದು

Share This Article
Leave a comment