ದೀಪಾವಳಿ ನಂತರ ಜೆಡಿಎಸ್ – ಬಿಜೆಪಿಯ ಅನೇಕ ಶಾಸಕರುಕಾಂಗ್ರೆಸ್ ಗೆ ಸೇರ್ಪಡೆ – ಡಿಕೆಶಿ

Team Newsnap
1 Min Read

ನವದೆಹಲಿ :
ದೀಪಾವಳಿ ನಂತರ ಹಲವು ಜೆಡಿಎಸ್ – ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಬುಧವಾರ ತಿಳಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳುವ ಮೂಲಕ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಈಗಿರುವ ಪರಿಸ್ಥಿತಿಯಲ್ಲಿ ನಮ್ಮ ಒಬ್ಬ ಶಾಸಕರನ್ನೂ ಅವರಿಗೆ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದರು.

ಬಿಜೆಪಿ ಅವರು ಸದಾ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರಬೇಕು. ಹಾಗಾಗಿ ಅಲ್ಲಿಲ್ಲಿ ಹೋಗುತ್ತಾ, ಅವರಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಾ ಸುದ್ದಿಯಾಗುತ್ತಿದ್ದಾರಷ್ಟೆ. ಮಾರ್ಕೆಟ್ ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಭೆ ಆಗಿರುವ ಬಗ್ಗೆ ನಾನು ಮಾತನಾಡಲ್ಲ. ಎಲ್ಲಾ ಮೂಮೆಂಟ್ ಗೊತ್ತಿದೆ, ನಿರುದ್ಯೋಗಿಗಳು ಚಪಲಕ್ಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article
Leave a comment