ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ 13 ರನ್ಗಳ ರೋಚಕ ಜಯ ಸಾಧಿಸಿದೆ. ಅಂತಿಮ ಐದು ಓವರ್ಗಳಲ್ಲಿ ಸಂಘಟಿತ ದಾಳಿ ನಡೆಸಿದ ಡೆಲ್ಲಿ ಬೌಲರುಗಳು ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್ಮನ್ಗಳನ್ನು 148ಕ್ಕೆ ನಿಯಂತ್ರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಅಲ್ಲದೆ, 12 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇ ಏರಿದರು. ಸಾಕಷ್ಟು ಅಡೆತಡೆಗಳನ್ನು ಎದುರಿಸಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭಿಸಲಾಗಿದೆ. ಪ್ರತಿ ವರ್ಷ ಭಾರತದಲ್ಲಿ ಐಪಿಎಲ್ ನಡೆಯುತ್ತಿತ್ತು. ಆದರೆ, ಈ ಬಾರಿ ಐಪಿಎಲ್ ಯುಎಇಗೆ ಶಿಫ್ಟ್ ಆಗಿದೆ. ಸೆಪ್ಟೆಂಬರ್ 19ರಿಂದ ಹೊಡಿಬಡಿ ಆಟ ಅಭಿಮಾನಿಗಳನ್ನು ರಂಜಿಸುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡಿದ 8 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಎರಡಲ್ಲಿ ಸೋತಿದೆ. ಈ ಮೂಲಕ 12 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೇಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ಪಾತಾಳಕ್ಕೆ ಕುಸಿದಿದ್ದ ಆರ್ಸಿಬಿ ರನ್ ರೇಟ್ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಕೋಲ್ಕತ್ತಾ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಹೈದರಾಬಾದ್, ಸಿಎಸ್ಕೆ ಹಾಗೂ ರಾಜಸ್ಥಾನ ಅನುಕ್ರಮವಾಗಿ ಐದು, ಆರು ಹಾಗೂ ಏಳನೇ ಸ್ಥಾನಗಳಲ್ಲಿವೆ. ಕಿಂಗ್ಸ್ ಇಲವೆನ್ ಪಂಜಾಬ್ ಎರಡು ಅಂಕ ಪಡೆಯುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
source –
https://www.iplt20.com/points-table/2020
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು