ನಾಗಮಂಗಲದಲ್ಲಿ ‘ಕಾಂತಾರ’ ವೀಕ್ಷಿಸಿ, ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Team Newsnap
0 Min Read

ಕಾಂತಾರ ಸಿನಿಮಾ ವೀಕ್ಷಿಸಿ, ಚಿತ್ರಮಂದಿರದಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಜರುಗಿದೆ.

ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ, ರಾಜಶೇಖರ್ ಕಾಂತಾರ ಸಿನಿಮಾ ವೀಕ್ಷಿಸಲು ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿದ್ದರು.

ಖುಷಿಯಾಗಿಯೇ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದ ರಾಜಶೇಖರ್(45), ಥಿಯೇಟರ್ ನಿಂದ ಆಚೆ ಬರುವಾಗ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಯೇ ಕುಸಿದು ಕೂತಿದ್ದಾರೆ. ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment