Trending

ಅಗ್ನಿ-4 ಕ್ಷಿಪಣಿ ಪರೀಕ್ಷೆ ಪ್ರಯೋಗ ಯಶಸ್ವಿ- 4000 ಕಿ.ಮೀ. ದೂರದಿಂದಲೇ ಶತ್ರುಪಡೆ ನಾಶ

ಮಧ್ಯಮ ವ್ಯಾಪ್ತಿಯ ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.

ಇದನ್ನು ಓದಿ –ಜೂ.13ರಿಂದ ಎರಡು ದಿನ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಭೇಟಿ

ಈ ಮೂಲಕ ಭಾರತ ಸೇನೆಗೆ ಮತ್ತಷ್ಟು ಬಲ ಬಂದಿದೆ . 4000 ಕಿ.ಮೀ. ದೂರದಿಂದಲೇ ಶತ್ರುಪಡೆಗಳಿಗೆ ಗುರಿ ಇಡಬಹುದಾಗಿದೆ. ​​ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಸೋಮವಾರ ರಾತ್ರಿ 7.30ರ ಸುಮಾರಿಗೆ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ.

ಅಗ್ನಿ-IV ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆಯು ದೇಶದ ಸೇನಾ ಸಾಮರ್ಥ್ಯದ ಗಮನಾರ್ಹ ಹೆಚ್ಚಳದ ಸಂಕೇತವಾಗಿದೆ ಎಂದು ರಕ್ಷಣಾ ಸಚಿವಾಲಯ ಬಣ್ಣಿಸಿದೆ.

ಅಗ್ನಿ-4 ರ ಯಶಸ್ವಿ ಪರೀಕ್ಷೆಯು ಭಾರತದ ‘ವಿಶ್ವಾಸಾರ್ಹ ಕನಿಷ್ಠ ತಡೆ’ ನೀತಿಯನ್ನು ಪುನರುಚ್ಚರಿಸುತ್ತದೆ.
ಅಗ್ನಿ-4 ಕ್ಷಿಪಣಿಯು ಅಗ್ನಿ ಸರಣಿಯ 4ನೇ ಮಿಸೈಲ್‌ ಆಗಿದೆ. ಈ ಹಿಂದೆ ಅಗ್ನಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣಿ ಯಶಸ್ವಿಯಾಗಿತ್ತು. ಅಗ್ನಿ-2 ಕ್ಷಿಪಣಿಯು 1000 ದಿಂದ 2000 ಕಿ.ಮೀ. ಗುರಿ ವ್ಯಾಪ್ತಿ ಹೊಂದಿತ್ತು. ಇದೀಗ ಅಗ್ನಿ -4 ಕ್ಷಿಪಣಿ ಕೂಡ ಯಶಸ್ವಿಯಾಗಿದೆ, ಇದು ಅಗ್ನಿ ಸರಣಿಯ ಕ್ಷಿಪಣಿಗಳಲ್ಲಿ ಸುಧಾರಿತ ಸರಣಿಯಾಗಿದೆ. ಈ ಕ್ಷಿಪಣಿಗಳನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಅಭಿವೃದ್ಧಿಪಡಿಸಿದೆ. ಈ ಮೂಲಕ ಭಾರತ ಸೇನೆ ಬತ್ತಳಿಕೆಗೆ ಮತ್ತೊಂದು ಪ್ರಬಲ ಅಸ್ತ್ರ ಸೇರ್ಪಡೆಯಾದಂತಾಗಿದೆ.

ಕ್ಷಿಪಣಿ ಪರೀಕ್ಷೆಯು ಎಲ್ಲಾ ಕಾರ್ಯಾಚರಣೆಗಳು ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಿದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024