ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಬೇಡಿಕೆ ಇಟ್ಟಿದರು ಎಂದು ಆರೋಪಿಸಿ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎನ್ನಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
ಮಂಡ್ಯದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆನ್ನಲಾದ ಪತ್ರವೊಂದು ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರ ಜೊತೆ ಸಮಾಲೋಚನೆ ನಡೆಸಿ, ಸುಧೀರ್ಘ ಚರ್ಚೆ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರಿಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆʼ ಎಂದು ಹೇಳಿದರು.
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆಂಬ ವಿಚಾರ ಕುರಿತು ಮಾತನಾಡಿ, ಕೆಲಸ ನಿಲ್ಲಿಸಿಲ್ಲ. ಭಾರತೀಯ ವೈಭವ್ ತನೇಜಾ ಟೆಸ್ಲಾ CFO – ಬೆಂಗಳೂರಿನ ನಂಟು
ತನಿಖೆ ಆಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ